ಕೊಪ್ಪಳ,ಏ,೧೩: ಕಳೆದ ೩೦ ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಮಂತ್ರದಲ್ಲಿಯೇ ಎಲ್ಲಾ ಪಕ್ಷದ ಮುಖಂಡರು ಬರಿ ಕ್ಷೇತ್ರದ ಜನತೆಗೆ ವಂಚಿಸುತ್ತಾ ಬಂದಿದ್ದಾರೆ. ಇನ್ನಾದರೂ ಜನತೆ ಬದಲಾವಣೆಗೆ ಮುಂದಾಗಬೇಕಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ರಾಜು ಹಲಗೇರಿ, ಕೋಟ್ರಪ್ಪ ಕೋರ್ಲಳ್ಳಿ, ಎಂ.ಡಿ. ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಮಹೆಮುದ್ ಹುಸೇನಿ, ಟಿ.ಟಿ. ಪಾಟೀಲ್, ಸಿದ್ದಾರಡ್ಡಿ ಡಂಬ್ರಳ್ಳಿ, ಇಸೂಫ್‌ಖಾನ್, ಹನುಮಂತಪ್ಪ ಹೀರೆಸಿಂದೋಗಿ, ದೇವೆಂದ್ರಪ್ಪ, ಭಾಗ್ಯನಗರದ ಮಂಜುನಾಥ ಶ್ಯಾವಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ, ಪ್ರಭು ಬಬ್ಲಿ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಭಾಗ್ಯನಗರ ಯುವಘಟಕದ ಸಭೆ
ಕೊಪ್ಪಳ,ಏ,೧೩: ನಗರದ ಕೂಗಳತೆ ದೂರದಲ್ಲಿರುವ ಭಾಗ್ಯನಗರ ಗ್ರಾಮದಲ್ಲಿ ಇಂದು ಜೆಡಿಎಸ್ ಯುವ ಘಟಕದ ಸಭೆ ನಡೆಸಲಾಯಿತು. ಸಭೆಯ ನೇತೃತ್ವವನ್ನು ಪಕ್ಷದ ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಮಂಜುನಾಥ್ ಗಡ್ಡದ್, ರಾಮಚಂದ್ರ ಅಡ್ಡೇದರ್, ಮಂಜುನಾಥ ಶ್ಯಾವಿ ಇತರರ ಮುಖಂಡತ್ವದಲ್ಲಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುಮಾರು ನೂರಕ್ಕೂ ಹೆಚ್ಚು ಯುವಕರು ಪಕ್ಷ ಸೇರ್ಪಡೆಗೊಳ್ಳುವ ಆಶಯ ವ್ಯಕ್ತಪಡಿಸಿದರಲ್ಲದೇ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಳ್ಳುವ ಮೂಲಕ ಕ್ಷೇತ್ರದ ಬದಲಾವಣೆಯಲ್ಲಿ ಕೈಜೋಡಿಸಿ ಪಕ್ಷದ ಬೆನ್ನೆಲುಬಾಗಿ ನಿಲ್ಲುವ ಭರವಸೆ ನೀಡಿದರು.
0 comments:
Post a Comment