Tuesday, April 9, 2013

ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಸೇರ್ಪಡೆ

ಬಿಎಸ್‌ಆರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ
ಕೊಪ್ಪಳ,ಏ,೦೯: ತಾಲೂಕಿನ ಹಿಟ್ನಾಳ ಗ್ರಾಮದ ಹಾಗೂ ಹೋಬಳಿ ವ್ಯಾಪ್ತಿಯ ಬಿಎಸ್‌ಆರ್ ಕಾಂಗ್ರೆಸ್ ಪಕ್ಷ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್. ರಮೇಶ ಒಣಬಳ್ಳಾರಿ ಹಾಗೂ ನಗರ ಘಟಕದ ಅಧ್ಯಕ್ಷ ಸೈಯ್ಯದ್ ಮಹೆಮುದ್ ಹುಸೇನಿ ನೇತೃತ್ವದಲ್ಲಿ ಜೆಡಿಎಸ್ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶ ಭೂಮರೆಡ್ಡಿ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ಹಿಟ್ನಾಳ ಗ್ರಾಮದ ಅಲ್ಲಾ ಬಕ್ಷಿ, ಅನಿಲ್ ಕುಮಾರ, ನಾಗಲಿಂಗಪ್ಪ, ಕಾಶಿನಾಥ, ಖಾಜಾವಲಿ, ಅಶೋಕ, ಕಿಶೋರ, ಪ್ರಭು, ಶೇಕ್ಷಾವಲಿ, ಗಣೇಶ, ಕೇಶಣ್ಣ, ಶರೀಫ್, ಸೋಮಣ್ಣ, ಸುರ್ಯ, ಚಾಂದ್‌ಪಾಷಾ, ಮಾರುತಿ, ಬಾಷಾ ಸೇರಿದಂತೆ ಇತರರು ಪಕ್ಷ ಸೇರ್ಪಡೆಗೊಂಡರು.

ಕೊಪ್ಪಳ,ಏ,೦೯: ಕ್ಷೇತ್ರದ ಸಂಪೂರ್ಣ ಬದಲಾವಣೆಗೆ ಬೆಂಬಲಿಸಿ ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮೀಣ ಪ್ರದೇಶಗಳ ಕಾಂಗ್ರೆಸ್, ಬಿಜೆಪಿ ಮತ್ತು ಬಿಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜೆಡಿಎಸ್ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶ ಭೂಮರೆಡ್ಡಿ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಮುಝಾಫರ್ ಷಾ, ರಾಜ್ಯ ಸಂಘಟನಾ ಉಪಾದ್ಯಕ್ಷ ಆರ್. ವಹೀದ್ ಅಹಮ್ಮದ್ ಷಾಹ್, ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ,,ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಮಿನಾಕ್ಷಮ್ಮ ಬನ್ನಿಕೊಪ್ಪ, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಮಹೆಮುದ್ ಹುಸೇನಿ,  ಸಿದ್ದೇಶ್ ದದೇಗಲ್,ಶಿವರಾಮ್ ಗಬ್ಬೂರ,ಕೋಟ್ರಪ್ಪ ಕೋರ್ಲಳ್ಳಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.





.

0 comments:

Post a Comment